← ಇತರೆ

ಆರು ಬಾಳಿದರೇನು ಆರು ಬದುಕಿದರೇನು

📂 ಇತರೆ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಮೋಹನ
🥁 ತಾಳ: ಆಟತಾಳ
ಆರು ಬಾಳಿದರೇನು ಆರು ಬದುಕಿದರೇನು
ನಾರಾಯಣನ ಸ್ಮರಣೆ ನಮಗಿಲ್ಲದನಕ ||ಪ||

ಉಣ್ಣಬರದವರಲ್ಲಿ ಊರೂಟವಾದರೇನು
ಹಣ್ಣು ಬಿಡದ ಮರಗಳು ಹಾಳಾದರೇನು
ಕಣ್ಣಿಲ್ಲದವಗಿನ್ನು ಕನ್ನಡಿಯಿದ್ದು ಫಲವೇನು
ಪುಣ್ಯವಿಲ್ಲದವನ ಪ್ರೌಢಿಮೆ ಮೆರೆದರೇನು ||1||

ಅಕ್ಕರಿಲ್ಲದವಗೆ ಮಕ್ಕಳಿದ್ದು ಫಲವೇನು
ಹೊಕ್ಕು ನಡೆಯದ ನಂಟತನದೊಳೇನು
ರೊಕ್ಕವಿಲ್ಲದವಗೆ ಬಂಧುಗಳು ಇದ್ದರೇನು
ಮರ್ಕಟನ ಕೈಯೊಳಗೆ ಮಾಣಿಕ್ಯವಿದ್ದರೇನು ||2||

ಅಲ್ಪ ದೊರೆಗಳ ಜೀತ ಎಷ್ಟು ಮಾಡಿದರೇನು
ಬಲ್ಪಂಥವಿಲ್ಲದವನ ಬಾಳ್ವೆಯೇನು
ಕಲ್ಪಕಲ್ಪಿತ ಕಾಗಿನೆಲೆಯಾದಿಕೇಶವನ
ಸ್ವಲ್ಪವೂ ನೆನೆಯದ ನರನಿದ್ದರೇನು ||3||
← ಇತರೆ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.