← ಶ್ರೀಕೃಷ್ಣ

ಇಂದು ಸೈರಿಸಿರಿ ಶ್ರೀಕೃಷ್ಣನ ತಪ್ಪ

📂 ಶ್ರೀಕೃಷ್ಣ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಶಂಕರಾಭರಣ
🥁 ತಾಳ: ಏಕತಾಳ
ಇಂದು ಸೈರಿಸಿರಿ ಶ್ರೀಕೃಷ್ಣನ ತಪ್ಪ ||ಪ||
ಮುಂದಕೆ ನಿಮ್ಮ ಮನೆಗೆ ಬಾರನಮ್ಮ ||ಅ||

ಮಗುವು ಬಲ್ಲುದೆ ಇಷ್ಟು ಬೆಣ್ಣೆಯ ಕದ್ದರೆ
ಬಿಗಿಯಬಹುದೇ ಶ್ರೀ ಚರಣವನು
ಅಗಣಿತ ಮಹಿಮನ ಅಂಜಿಸಲೇಕಮ್ಮ
ಬಗೆಯಬಾರದೆ ನಿಮ್ಮ ಮಕ್ಕಳಂತೆ ||1||

ಹಸುಮಗುವನು ಕಂಡು ಮುದ್ದಿಸಲೊಲ್ಲದೆ
ಹುಸಿಗ ಕಳ್ಳನೆಂದು ಕಟ್ಟುವಿರಿ
ವಸುಧೆಯೊಳಗೆ ನಾನೊಬ್ಬಳೆ ಪಡೆದೆನೆ ನಿಮ್ಮ
ಹಸುಮಗುವಿನಂತೆ ಭಾವಿಸಬಾರದೆ ||2||

ಎಷ್ಟು ಸಾರಿಯು ನಾ ಬೇಡವೆಂದರೆ ಕೇಳ
ದುಷ್ಟ ಮಕ್ಕಳ ಕೂಡೆ ಒಡನಾಟವ
ಕಟ್ಟಿದ ನೆಲುವಿನ ಬೆಣ್ಣೆಯನೀವೆನು
ಬಿಟ್ಟು ಕಳುಹಿರಮ್ಮ ಆದಿಕೇಶವನ ||3||
← ಶ್ರೀಕೃಷ್ಣ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.