← ಶ್ರೀಕೃಷ್ಣ

ಎಂಥ ಕೀರುತಿ ಪೊತ್ತುವೆರಡು ಪಾದ

📂 ಶ್ರೀಕೃಷ್ಣ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಶಂಕರಾಭರಣ
🥁 ತಾಳ: ಆಟತಾಳ
ಎಂಥ ಕೀರುತಿ ಪೊತ್ತುವೆರಡು ಪಾದ- ಶ್ರೀ
ಕಾಂತ ಬಾಡದ ರಂಗ ಕರುಣಿ ದೇವೋತ್ತುಂಗ ||ಪ||

ಕುಬ್ಜ ಬ್ರಾಹ್ಮಣನಾಗಿ ಕುಂಭಿನಿ ಈರಡಿ ಮಾಡಿ
ಹೆಜ್ಜೆಯೊಳಡಗಿಟ್ಟ ಹೆಚ್ಚಿನ ಪಾದ
ಅರ್ಜುನನ ಶಿರವ ಕಾಯಲು ಬಾಣದಿಂದ ರಥವ
ಗುಜ್ಜೆಯಲೂರಿ ನೆಲಕೊತ್ತಿದ ಪಾದ ||1||

ಶಾಪದಿ ಬಹುಕಾಲ ಅಹಲ್ಯೆಯು ಶಿಲೆಯಾಗೆ
ಆ ಪ್ರಾಣ ನಿರ್ಮಿಸಿದ ಅಧಿಕ ಪಾದ
ಗೋಪಿ ಕಟ್ಟಿದ ಒರಳ ಗೊಲ್ಲಗೇರಿಗೆಳೆಯುತ
ಆ ಫಣಿಯ ತಲೆಯ ಮೇಲಾಡಿದ ಪಾದ ||2||

ಕುರುರಾಯನೇಳದೆಯೆ ಕುಳಿತ ಸಿಂಹಾಸನದಿ
ಉರುಳಿಸಿಬಿಟ್ಟಂತ ಉನ್ನತ ಪಾದ
ಮರಕತ ನಗರಿಯ ಬಾಡ ಬಂಕಾಪು
ದರಸು ಸಿರಿಯಾದಿಕೇಶವನ ಶ್ರೀಪಾದ ||3||
← ಶ್ರೀಕೃಷ್ಣ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.