← ಇತರೆ

ಎಂದೆಂದು ಇಂಥ ಚೋದ್ಯ ಕಂಡದ್ದಿಲ್ಲವೊ 

📂 ಇತರೆ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಶಂಕರಾಭರಣ
🥁 ತಾಳ: ಏಕತಾಳ
ಎಂದೆಂದು ಇಂಥ ಚೋದ್ಯ ಕಂಡದ್ದಿಲ್ಲವೊ ||ಪ||

ಅಂಗಡಿ ಬೀದಿಯೊಳೊಂದು ಆಕಳ ಕರು ನುಂಗಿತು
ಲಂಘಿಸುವ ಹುಲಿಯ ಕಂಡು ನರಿಯು ನುಂಗಿತು ||1||

ಹುತ್ತದೊಳಾಡುವ ಸರ್ಪ ಮತ್ತ ಗಜವ ನುಂಗಿತು
ಉತ್ತರದಿಶೆಯೊಳು ಬೆಳುದಿಂಗಳಾಯಿತಮ್ಮ ||2||

ಯೋಗ ಮಾರ್ಗಿ ಕಾಗಿನೆಲೆಯಾದಿಕೇಶವರಾಯ
ಭಾಗವತರ ಬೆಡಗಿದು ಬೆಳುದಿಂಗಳಾಯಿತಮ್ಮ ||3||
← ಇತರೆ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.