← ಶ್ರೀಹನುಮಂತ

ಎನ್ನ ಕಂದ ಹಳ್ಳಿಯ ಹನುಮ 

📂 ಶ್ರೀಹನುಮಂತ
✍️ ಕನಕದಾಸ
🏷️ ಕೀರ್ತನೆಗಳು
ಎನ್ನ ಕಂದ ಹಳ್ಳಿಯ ಹನುಮ
ಚೆನ್ನಾಗೈದಾರ ಲಕ್ಷ್ಮಣ ದೇವರು

ತುಪ್ಪ ಪಂಚಾಮೃತವಂದು ಅಡವಿಗಡ್ಡೆಗಳಿಂದುಕರ್ಪೂರ ವೀಳ್ಯವಂದು ಕುರುಕು ಇಂದುಸುಪ್ಪತ್ತಿಗೆ ಮಂಚವಂದು ಹುಲ್ಲು ಹಾಸಿಗೆಯಿಂದುಶ್ರೀಪತಿ ರಾಘವ ಕ್ಷೇಮದಲೈದಾರೆ||1||

ನವ ವಸ್ತ್ರಗಳು ಅಂದು ನಾರಸೀರೆಗಳಿಂದುಹೂವಿನ ಗಂಟು ಅಂದು ಜಡೆಗಳಿಂದುಜವ್ವಾಜಿ ಕತ್ತುರಿಯಂದು ಭಸಿತ ಧೂಳಿಂದುಶ್ರೀವರ ರಾಘವ ಕ್ಷೇಮದಲೈದಾರೆ||2||

ಕನಕ ರಥಗಳಂದು ಕಾಲುನಡಿಗೆಯಿಂದುಘನ ಛತ್ರ ಚಾಮರವಂದು ಬಿಸಿಲು ಇಂದುಸನಕಾದಿಗಳೋಲೈಪ ಆದಿಕೇಶವ ನಮ್ಮಹನುಮೇಶ ರಾಘವ ಕ್ಷೇಮದಲೈದಾರೆ ||3||
← ಶ್ರೀಹನುಮಂತ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.