← ವೈರಾಗ್ಯ

ಏಕೆ ದಯವಿನಿತಿಲ್ಲ ಲೋಕಪಾವನ

📂 ವೈರಾಗ್ಯ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಕಾಂಬೋಧಿ
🥁 ತಾಳ: ಝಂಪೆತಾಳ
ಏಕೆ ದಯವಿನಿತಿಲ್ಲ ಲೋಕಪಾವನ ಮೂರ್ತಿ ||ಪ||
ಬೇಕೆಂದು ನಿನ್ನ ಪಾದ ನಂಬಿದ ದಾಸನ ಮೇಲೆ ||ಅ||

ಎಡರಿಗಾಗುವರಿಲ್ಲ ಕಡನ ನಂಬುವರಿಲ್ಲ
ಬಡವನೆಂದು ವಸ್ತ್ರವ ಕೊಡುವರಿಲ್ಲ
ದೃಢದೊಳಿದ್ದರು ಬವಣೆ ಬಂದೊಡನೆ ಕಾಡುವುವು
ಒಡೆಯ ಕಂಡೂ ಕಾಣದಿರುವುದುಚಿತವಲ್ಲ ||1||

ಮೊರೆಯ ಕೇಳುವರಿಲ್ಲ ಸಿರಿವಂತ ನಾನಲ್ಲ
ಪರಮಾತ್ಮ ನಿನ್ನೊಳಗ ನಾನರಿತಿಲ್ಲ
ಬೆರೆತುಕೊಂಡಿರಲು ಸಜ್ಜನರ ಗೆಳೆತನವಿಲ್ಲ
ಪರಮಹಂಸನೆ ಹರಿಸೊ ಇಂಥ ಕೊರತೆಗಳೆಲ್ಲ ||2||

ನೀಲವರ್ಣದ ಲೋಲ ಕಾಲನವರಿಗೆ ಶೂಲ
ಬಾಲ್ಯದಿ ಯಶೋದೆಯ ಹಾಲ ಸವಿದ ಗೋಪಾಲ
ನಾಲಗೆಗೆ ನಿನ್ನ ವಿಶಾಲ ಅಷ್ಟಾಕ್ಷರಿಯನಿತ್ತು
ಪಾಲಿಸೋ ಶ್ರೀಕಾಗಿನೆಲೆಯಾದಿ ಕೇಶವನೆ ||3||
← ವೈರಾಗ್ಯ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.