← ಶ್ರೀಕೃಷ್ಣ

ಏನೆಂದಳೇನೆಂದಳೋ  ನಿನ್ನೊಳು ಸೀತೆ

📂 ಶ್ರೀಕೃಷ್ಣ
✍️ ಕನಕದಾಸ
🏷️ ಕೀರ್ತನೆಗಳು
ಏನೆಂದಳೇನೆಂದಳೋ
ನಿನ್ನೊಳು ಸೀತೆ ಹನುಮಯ್ಯ

ಜನಕನರಮನೆಯಲ್ಲಿ ಜನಿಸಿ ಸುಖದಲ್ಲಿರಲುಧನು ಮುರಿದು ಕೈಹಿಡಿದು ತನ್ನಘನ ಪದವಿಯನು ಬಿಟ್ಟು ವನವ ಸೇರಿದನೆಂದುವನಿತೆ ತಪಿಸುತೆ ಮನದಿ ನೊಂದು|| 1||

ಕುರುಹಿನುಂಗುರವನು ತರಳಾಕ್ಷಿಗಿತ್ತಾಗತಿರುಳಿಗಿಂತಧಿಕವೇ ಕರಟವೆಂದುಬೆರಳಿಂದ ಚಿಮ್ಮಿದಳೆ ಅಶೋಕವನದಾಚೆಗೆನಿರುತ ಸಂತಾಪದಲಿ ಮನದಿ ನೊಂದು ||2||

ಸೇತುವೆಯ ಕಟ್ಟಿ ಸಿಂಧುಗೆ ವಿಭೀಷಣಾಗ್ರಜಾತ ಲಂಕಾಧಿಪನ ವಧಿಸಿಸೀತೆಯನು ಸೆರೆಯಿಂದ ಬಿಡಿಸಿದ್ದೆ ಆದರೆನಾಥಾದಿಕೇಶವಗೆ ಬಲು ಬಿರುದು ಎಂದು||3||
← ಶ್ರೀಕೃಷ್ಣ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.