← ಶ್ರೀಕೃಷ್ಣ

ಒಂಬತ್ತು ಹೂವಿಗೆ ಒಂದೇ ನಾಳವು ಚಂದಮಾಮ 

📂 ಶ್ರೀಕೃಷ್ಣ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಸೌರಾಷ್ಟ್ರ
🥁 ತಾಳ: ಆಟತಾಳ
ಒಂಬತ್ತು ಹೂವಿಗೆ ಒಂದೇ ನಾಳವು ಚಂದಮಾಮ ||ಪ||
ತುಂಬಿ ನಾಳತುದಿ ತುಂಬಿ ಭಾನು ಪ್ರಭೆ ಚಂದಮಾಮ ||ಅ||

ಕದರು ಗಾತರ ಕಂಬ ತೆಕ್ಕೆಗಾತರ ಹೂವು ಚಂದಮಾಮ
ಆನೆ ಗಾತರ ಕಾಯಿ ಒಂಟೆ ಗಾತರ ಹಣ್ಣು ಚಂದಮಾಮ ||1||

ಕಾಲಿಲ್ಲದಾತನು ಹತ್ತಿದನಾ ಮರವನು ಚಂದಮಾಮ
ಕೈಯಿಲ್ಲದಾತನು ಕೊಯ್ದನಾ ಹಣ್ಣನು ಚಂದಮಾಮ ||2||

ನೆತ್ತಿಲ್ಲದಾತನು ಹೊತ್ತನಾ ಹಣ್ಣ ಚಂದಮಾಮ
ತಳವಿಲ್ಲದಾ ಗೂಡೆಯಲಿಳಿಸಿದನಾ ಹಣ್ಣ ಚಂದಮಾಮ ||3||

ಮಾರ್ಗ ತಪ್ಪಿ ಮಾರ್ಗ ಹಿಡಿದು ನಡೆದರು ಚಂದಮಾಮ
ಸದ್ದಿಲ್ಲದಾ ಸಂತೇಲಿಳಿಸಿದರಾ ಹಣ್ಣ ಚಂದಮಾಮ ||4||

ರೊಕ್ಕವಿಲ್ಲದಾತ ಕೊಂಡನಾ ಹಣ್ಣ ಚಂದಮಾಮ
ಮೂಗಿಲ್ಲದಾತ ಮೂಸಿದನಾ ಹಣ್ಣ ಚಂದಮಾಮ ||5||

ಕಣ್ಣಿಲ್ಲದಾತನು ಕೆಂಪಾನೆ ಹಣ್ಣೆಂದ ಚಂದಮಾಮ
ಅಂಗುಳಿಲ್ಲದಾತ ನುಂಗಿದನಾ ಹಣ್ಣ ಚಂದಮಾಮ ||6||

ಬಾಯಿಲ್ಲದಾತ ತಿಂದು ಬಸಿರಲಿಂಬಿಟ್ಟ ಚಂದಮಾಮ
ಸುಲಭ ಪದವಿದು ನಳಿನಜಾಂಡದೊಳು ಚಂದಮಾಮ ||7||

ಗುರುವಿನ ಮಹಿಮೆ ಗುರುವೆ ತಾ ಬಲ್ಲನು ಚಂದಮಾಮ
ಮೂಢನಾದವನೇನು ಬಲ್ಲನು ಈ ಮಾತ ಚಂದಮಾಮ ||8||

ಕನಕನಾಡಿದ ಗುಟ್ಟು ಆದಿಕೇಶವ ಬಲ್ಲ ಚಂದಮಾಮ
ತಿಳಿದವರು ಪೇಳಿರೀ ಹಳೆಗನ್ನಡವ ಚಂದಮಾಮ ||9||
← ಶ್ರೀಕೃಷ್ಣ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.