← ಇತರೆ

ಕುಲ ಕುಲ ಕುಲವೆನ್ನುತಿಹರು 

📂 ಇತರೆ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಮಧ್ಯಮಾವತಿ
🥁 ತಾಳ: ಝಂಪೆತಾಳ
ಕುಲ ಕುಲ ಕುಲವೆನ್ನುತಿಹರು ||ಪ||
ಕುಲವ್ಯಾವುದು ಸತ್ಯ ಸುಖವುಳ್ಳ ಜನರಿಗೆ ||ಅ||

ಕೆಸರೊಳು ತಾವರೆ ಪುಟ್ಟಲು ಅದ ತಂದು
ಬಿಸಜನಾಭನಿಗರ್ಪಿಸಲಿಲ್ಲವೆ
ಹಸುವಿನ ಮಾಂಸದೊಳುತ್ಪತ್ತಿ ಕ್ಷೀರವ
ವಸುಧೆಯೊಳಗೆ ಭೂಸುರರುಣಲಿಲ್ಲವೆ ||1||

ಮೃಗಗಳ ಮೈಯಲಿ ಪುಟ್ಟಿದ ಕತ್ತುರಿಯ
ತೆಗೆದು ಪೂಸುವರು ದ್ವಿಜರೆಲ್ಲರು
ಒಗೆಯಿಂದ ನಾರಾಯಣನ್ಯಾವ ಕುಲ
ಅಗಜವಲ್ಲಭನ್ಯಾತರ ಕುಲದವನು ||2||

ಆತ್ಮ ಯಾವ ಕುಲ ಜೀವ ಯಾವ ಕುಲ
ತತ್ತ್ವೇಂದ್ರಿಯಗಳ ಕುಲ ಪೇಳಿರಯ್ಯ
ಆತ್ಮಾಂತರಾತ್ಮ ನೆಲೆಯಾದಿಕೇಶವನು
ಆತನೊಲಿದ ಮೇಲೆ ಯಾತರ ಕುಲವಯ್ಯ ||3||
← ಇತರೆ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.