← ಇತರೆ

ಜಪವ ಮಾಡಿದರೇನು ತಪವ ಮಾಡಿದರೇನು

📂 ಇತರೆ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಕಾಂಬೋಧಿ
🥁 ತಾಳ: ಝಂಪೆತಾಳ
ಜಪವ ಮಾಡಿದರೇನು ತಪವ ಮಾಡಿದರೇನು
ವಿಪರೀತ ಕಪಟಗುಣ ಕಲುಷವಿದ್ದವರು ||ಪ||

ಆದಿಗುರುವರಿಯದೆ ಅತ್ತಲಿತ್ತಲು ತೊಳಲಿ
ವೇದಶಾಸ್ತ್ರವನೋದಿ ಬಾಯಾರಲು
ಹಾದಿಯನು ಕಾಣದಂತಿರುತಿರ್ದು ಹಲವೆಂಟು
ವಾದ ತರ್ಕದೊಳಿದ್ದ ಭೇದವಾದಿಗಳು ||1||

ನುಡಿನಡೆವ ಕಾಲದಲಿ ದಾನ ಮಾಡದೆ ಇರಲು
ಅಡವಿಯೊಳು ಕೆರೆತುಂಬಿ ಬತ್ತಿದಂತೆ
ಮಡದಿ ಮಕ್ಕಳಿಗೆಂದು ಒಡವೆ ವಸ್ತ್ರವ ಗಳಿಸೆ
ಹಿಡಿಯಲಾ ಯಮನವರ ಕಟ್ಟಿಗೊಳಗಾಗಿ ||2||

ಚಳಿಮಳೆಯ ಅತಿ ಕಾರುಗತ್ತಲೆಯೊಳಗೆ ಎದ್ದು
ಹೊಳೆಯೊಳಗೆ ಮುಳುಗಿ ಜಪ ತಪವ ಮಾಡಿ
ಕಳವಳಿಸಿ ನೂರೆಂಟು ಹಲುಬಿ ಬಳಲಲು ಬೇಡ
ನಳಿನಾಕ್ಷ ಆದಿಕೇಶವನ ನೆನೆ ಮನವೆ ||3||
← ಇತರೆ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.