← ಶ್ರೀಕೃಷ್ಣ

ಜಯಮಂಗಲಂ ನಿತ್ಯ ಶುಭಮಂಗಲಂ

📂 ಶ್ರೀಕೃಷ್ಣ
✍️ ಕನಕದಾಸ
🏷️ ಕೀರ್ತನೆಗಳು
ಜಯಮಂಗಲಂ ನಿತ್ಯ ಶುಭಮಂಗಲಂ

ವಾತಜಾತನು ಆಗಿ ಖ್ಯಾತಿಯಲಿ ಮೆರೆದಗೆಸೇತುವೆಯ ಭರದಿಂದ ಲಂಘಿಸಿದಗೆಸೀತೆಯನು ವಂದಿಸುತೆ ಉಂಗುರವನಿತ್ತವಗೆದೈತ್ಯಪುರವನು ಭರದಲುರಿಸಿದವಗೆ ||1||

ವಸುಧೆಯಲಿ ಕುಂತಿನಂದನನಾಗಿ ಉದಿಸಿದಗೆಕುಸುಮವನು ತಂದು ದ್ರೌಪದಿಗಿತ್ತಗೆಕುಶಲತನದಲಿ ಕೌರವಾದಿಗಳ ಸಂಹರಿಸಿ-ದಸಹಾಯ ವೀರ ಶ್ರೀ ಭೀಮಸೇನಗೆ ||2||

ಮಧ್ಯಗೃಹದಾತನಾ ಸತಿಯಲ್ಲಿ ಉದಿಸಿದಗೆಬೌದ್ಧ ಚಾರ್ವಾಕ ಮಾಯ್ಗಳ ಜರಿದಗೆಮಧ್ವಶಾಸ್ತ್ರವನೆಲ್ಲ ಸಜ್ಜನರಿಗೊರೆದಗೆಮುದ್ದು ಶ್ರೀಆದಿಕೇಶವನ ಭಜಕಗೆ ||3||
← ಶ್ರೀಕೃಷ್ಣ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.