← ಶ್ರೀಕೃಷ್ಣ

ಡೊಂಕು ಬಾಲದ ನಾಯಕರೆ

📂 ಶ್ರೀಕೃಷ್ಣ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ನವರೋಜ್
🥁 ತಾಳ: ಆದಿತಾಳ
ಡೊಂಕು ಬಾಲದ ನಾಯಕರೆ ನೀವೇನೂಟವ ಮಾಡಿದಿರಿ

ಕಣಕ ಕುಟ್ಟೋ ಅಲ್ಲಿಗೆ ಹೋಗಿ ಹಣಿಕಿ ಇಣಿಕಿ ನೋಡುವಿರಿ
ಕಣಕ ಕುಟ್ಟೋ ಒನಕಿಲಿ ಹೊಡೆದರೆ ಕುಯ್ ಕುಯ್ ರಾಗವ ಪಾಡುವಿರಿ ||1||

ಹುಗ್ಗಿ ಮಾಡೋ ಅಲ್ಲಿಗೆ ಹೋಗಿ ತಗ್ಗಿ ಬಗ್ಗಿ ನೋಡುವಿರಿ
ಹುಗ್ಗಿ ಮಾಡೋ ಸೌಟಲಿ ಹೊಡೆದರೆ ಕುಯ್ ಕುಯ್ ರಾಗವ ಪಾಡುವಿರಿ ||2||

ಹಿರಿಯ ಹಾದಿಲಿ ಓಡುವಿರಿ ಕರಿಯ ಬೂದಿಲಿ ಹೊರಳುವಿರಿಸಿರಿ ಕಾಗಿನೆಲೆಯಾದಿಕೇಶವನ ಸ್ಮರಿಸದವರ ಗತಿ ತೋರುವಿರಿ ||3||

(* ಈ ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.)
← ಶ್ರೀಕೃಷ್ಣ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.