← ಇತರೆ

ದ್ರೋಹಿಗಳ ವಿವರವನು ನಾ ಪೇಳ್ವೆನಯ್ಯ

📂 ಇತರೆ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಮುಖಾರಿ
🥁 ತಾಳ: ಝಂಪೆತಾಳ
ದ್ರೋಹಿಗಳ ವಿವರವನು ನಾ ಪೇಳ್ವೆನಯ್ಯ ||ಪ||

ಕೂಡಿದೆಡೆಯಲಿ ಕಪಟವೆಸಗುವನೆ ದ್ರೋಹಿ
ಮಾಡಿದುಪಕಾರವನು ಮರೆವವನೆ ದ್ರೋಹಿ
ಚಾಡಿ ಕೊಂಡೆಗಳನಾಡಿ ನಡೆವವನೆ ದ್ರೋಹಿ
ರೂಢಿಯೊಳು ಬಾಳುವರ ಸಹಿಸದವನೆ ದ್ರೋಹಿ ||1||

ಸತಿಯಿದ್ದು ಪರಸತಿಯ ಬಯಸುವನೆ ದ್ರೋಹಿ
ಹೆತ್ತವರೊಡನೆ ಕಲಹ ಮಾಡುವನೆ ದ್ರೋಹಿ
ಯತಿಗಳನು ಒಂದೆ ಸಮ ನಿಂದಿಸುವನೆ ದ್ರೋಹಿ
ಸತಿಯನ್ನು ಪರರ ವಶ ಗೈವವನೆ ದ್ರೋಹಿ ||2||

ಹೊನ್ನಿದ್ದು ಅನ್ನದಾನ ಮಾಡದವನೆ ದ್ರೋಹಿ
ತನ್ನ ಗುರು ಸತಿಯ ಬಯಸುವವನೇ ದ್ರೋಹಿ
ಸನ್ನುತಾಂಗ ಕಾಗಿನೆಲೆಯಾದಿಕೆಶವನ
ತನ್ನೊಳಗೆ ತಾ ತಿಳಿದು ಸುಖಿಸದವನೆ ದ್ರೋಹಿ ||3||
← ಇತರೆ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.