← ಶ್ರೀಕೃಷ್ಣ

ನಮ್ಮಮ್ಮ ಶಾರದೆ ಉಮಾ ಮಹೇಶ್ವರಿ

📂 ಶ್ರೀಕೃಷ್ಣ
✍️ ಕನಕದಾಸ
🏷️ ಕೀರ್ತನೆಗಳು
ನಮ್ಮಮ್ಮ ಶಾರದೆ ಉಮಾ ಮಹೇಶ್ವರಿನಿಮ್ಮೊಳಗಿಹನ್ಯಾರಮ್ಮ
ಕಮ್ಮಗೋಲನ ವೈರಿಸುತನಾದ ಸೊಂಡಿಲಹೆಮ್ಮೈಯ್ಯ ಗಣನಾಥನೆ ಅಮ್ಮಯ್ಯ

ಮೋರೆ ಕಪ್ಪಿನ ಭಾವ ಮೊರದಗಲ ಕಿವಿಯುಳ್ಳಕೋರೆ ದಾಡೆಯವನ್ಯಾರಮ್ಮಮೂರು ಕಣ್ಣನ ಸುತ ಮುರಿದಿಟ್ಟ ಚಂದ್ರನಧೀರ ತಾ ಗಣನಾಥನೆ ಅಮ್ಮಯ್ಯ ||1||

ಉಟ್ಟ ದಟ್ಟಿಯು ಮತ್ತೆ ಬಿಗಿದುಟ್ಟ ಚಲ್ಲಣದದಿಟ್ಟ ತಾನಿವನ್ಯಾರಮ್ಮಪಟ್ಟದ ರಾಣಿ ಪಾರ್ವತಿಯ ಕುಮಾರಹೊಟ್ಟೆಯ ಗಣನಾಥನೆ ಅಮ್ಮಯ್ಯ||2||

ರಾಶಿ ವಿದ್ಯೆಯ ಬಲ್ಲ ರಮಣಿ ಹಂಬಲನೊಲ್ಲಭಾಷಿಗನಿವನ್ಯಾರಮ್ಮಲೇಸಾಗಿ ಸುಜನರ ಸಲಹುವ ನೆಲೆಯಾದಿಕೇಶವನ ದಾಸ ಕಾಣೆ ಅಮ್ಮಯ್ಯ ||3||
← ಶ್ರೀಕೃಷ್ಣ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.