← ಇತರೆ

ನಾಮ ಮುಂದೊ ಸ್ವಾಮಿ ವಿಭೂತಿ ಮುಂದೊ

📂 ಇತರೆ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಮುಖಾರಿ
🥁 ತಾಳ: ಆಟತಾಳ
ನಾಮ ಮುಂದೊ ಸ್ವಾಮಿ ವಿಭೂತಿ ಮುಂದೊ ||ಪ||

ಭೂಮಿ ಆಕಾಶ ಪೊತ್ತೊ ಆಕಾಶ ಭೂಮಿಯ ಪೊತ್ತೊ
ಭೂಮಿಯು ಮುಂದೊ ಆಕಾಶ ಮುಂದೊ ಸ್ವಾಮಿ ||1||

ತತ್ತಿ ಹಕ್ಕಿಯ ಪೊತ್ತೊ ಹಕ್ಕಿ ತತ್ತಿಯ ಪೊತ್ತೊ
ತತ್ತಿಯು ಮುಂದೊ ಹಕ್ಕಿಯು ಮುಂದೊ ಸ್ವಾಮಿ ||2||

ಬೀಜ ವೃಕ್ಷವ ಪೊತ್ತೊ ವೃಕ್ಷ ಬೀಜವ ಪೊತ್ತೊ
ಬೀಜವು ಮುಂದೊ ವೃಕ್ಷವು ಮುಂದೊ ಸ್ವಾಮಿ ||3||

ಗಂಡ ಹೆಂಡಿರ ಪೊತ್ತೊ ಹೆಂಡಿರು ಗಂಡನ ಪೊತ್ತೊ
ಗಂಡನು ಮುಂದೊ ಹೆಂಡಿರು ಮುಂದೊ ಸ್ವಾಮಿ ||4||

ಕನಕನು ಹೇಳಿದ ಬೆಡಗಿದು ಕಂಡವರೆಲ್ಲರು
ಮನದಲಿ ಚಿಂತಿಸಿ ಮಥಿಸಿ ನವನೀತ ಕಾಣಿರಿ ||5||
← ಇತರೆ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.