← ಶ್ರೀಕೃಷ್ಣ

ಭೀಮನೆಂಬುವಂಗೆ ಯಾತರ ಭಯವಿಲ್ಲ

📂 ಶ್ರೀಕೃಷ್ಣ
✍️ ಕನಕದಾಸ
🏷️ ಕೀರ್ತನೆಗಳು
ಭೀಮನೆಂಬುವಂಗೆ ಯಾತರ ಭಯವಿಲ್ಲ ಭೀಮರಾಯ
ಕಾಮಿತ ಫಲಗಳ ಕೊಟ್ಟು ನೀ ಸಲಹಯ್ಯ ಭೀಮರಾಯ

ಅಂಜನೆಯಾತ್ಮಜ ಅಗಣಿತ ಬಲವಂತ ಭೀಮರಾಯಕಂಜನಾಭನ ದೂತ ಕರುಣಿಸೊ ಬಲವಂತ ಭೀಮರಾಯ ||1||

ಕಟ್ಟಿದ ಪೂಮಾಲೆ ಕಸ್ತೂರಿ ನಾಮದ ಭೀಮರಾಯ - ಪೊಂಬಟ್ಟೆ ಪೀತಾಂಬರವನುಟ್ಟು ಮೆರೆವಂಥ ಭೀಮರಾಯ||2||

ವಾರಿಧಿಯನು ದಾಟಿ ಸೀತೆಗುಂಗುರವಿತ್ತ ಭೀಮರಾಯಸೂರಿವೆಗ್ಗಳತನ ಕಿತ್ತು ಈಡಾಡಿದ ಭೀಮರಾಯ||3||

ರಾಮರಾಯರಿಗೆ ನೀ ಪ್ರೇಮದ ಬಂಟನು ಭೀಮರಾಯಕಾಮಿತ ಫಲವಿತ್ತು ಕರುಣದಿ ಸಲಹಯ್ಯ ಭೀಮರಾಯ ||4||

ಛಪ್ಪನ್ನ ದೇಶಕ್ಕೆ ಒಪ್ಪುವ ಕಾಗಿನೆಲೆಯ ಭೀಮರಾಯತಪ್ಪದೆ ಕನಕಗೆ ವರಗಳ ಕೊಡುವಂಥ ಭೀಮರಾಯ ||5||
← ಶ್ರೀಕೃಷ್ಣ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.