← ಶ್ರೀರಾಮ

ರಾಮನಾಮವ ನೆನೆ ಮನವೆ

📂 ಶ್ರೀರಾಮ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಕಾಂಬೋಧಿ
🥁 ತಾಳ: ಆದಿತಾಳ
ರಾಮ ನಾಮವ ನೆನೆ ಮನವೆ ||ಪ||
ರಾಮ ಎಂದವನೆ ಧನ್ಯನೆಂದು ಶ್ರುತಿತತಿಗಳು ಪೊಗಳುತಿರೆ ||ಅ||

ತರುಣತನದಿ ದಿನ ದಾಟಿತು ಸುಮ್ಮನೆ
ಶರೀರದೊಳು ಸ್ವರವಾಡುತಲೆ
ತರುಣಿ ಸುತರು ಸಂಸಾರವೆಂಬ
ಶರಧಿಯೊಳಗೆ ಮುಳುಗಿರದೆ ಮನವೆ ||1||

ಬಗೆಬಗೆ ಜನ್ಮದಿ ಜನಿಸಿದೆ ನಾಳೆಗೆ
ಸಿಗುವುದೆ ನಿಜದಿಂ ಈ ಸಮಯ
ಮುಗುಧನಾಗಿ ಮತ್ತೆ ಜನಿಸಿ ಬರುವುದು
ಸೊಗಸು ಕಾಣುವುದೆ ಛಿ ಮನವೆ ||2||

ಚಿಂತೆಯನೆಲ್ಲ ಒತ್ತಟ್ಟಿಗೆ ಇಟ್ಟು
ಅಂತರಂಗದಲಿ ಧ್ಯಾನಿಸುತ
ಕಂತುಪಿತ ಕನಕಾದಿಕೇಶವನ
ಎಂತಾದರೂ ನೀ ಬಿಡಬೇಡ ಮನವೆ ||3||
← ಶ್ರೀರಾಮ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.