← ಶ್ರೀಕೃಷ್ಣ

ಸತ್ಯವಂತರ ಸಂಗವಿರಲು ತೀರ್ಥವ್ಯಾತಕೆ

📂 ಶ್ರೀಕೃಷ್ಣ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಪೂರ್ವೀ
🥁 ತಾಳ: ರೂಪಕತಾಳ
ಸತ್ಯವಂತರ ಸಂಗವಿರಲು ತೀರ್ಥವ್ಯಾತಕೆ
ನಿತ್ಯ ಜ್ಞಾನಿಯಾದ ಮೇಲೆ ಚಿಂತೆಯಾತಕೆ ||ಪ||

ತಾನು ಉಣ್ಣದ ಪರರಿಗಿಕ್ಕದ ಧನವಿದ್ಯಾತಕೆ
ಮಾನ ಹೀನನಾಗಿ ಬಾಳ್ವ ಮನುಜನ್ಯಾತಕೆ
ಜ್ಞಾನವಿಲ್ಲದೆ ನೂರುಕಾಲ ಬದುಕಲ್ಯಾತಕೆ
ಮಾನಿನಿಯ ತೊರೆದ ಮೇಲೆ ಭೋಗವ್ಯಾತಕೆ ||1||

ಮಾತು ಕೇಳದೆ ಮಲೆತು ನಡೆವ ಮಕ್ಕಳ್ಯಾತಕೆ
ಪ್ರೀತಿಯಿಲ್ಲದೆ ಎಡೆಯಲಿಕ್ಕಿದ ಅನ್ನವ್ಯಾತಕೆ
ನೀತಿಯರಿತು ನಡೆಯದಿರುವ ಬಂಟನ್ಯಾತಕೆ
ಸೋತ ಹೆಣ್ಣಿಗೆ ಓತು ನಡೆಯದ ಪುರುಷನ್ಯಾತಕೆ ||2||

ಸನ್ನೆಯರಿತು ನಡೆಯದಿರುವ ಸತಿಯು ಯಾತಕೆ
ಮನ್ನಣಿಂದೆ ನಡೆಸದಿರುವ ದೊರೆಯು ಯಾತಕೆ
ಮುನ್ನ ಕೊಟ್ಟು ಪಡೆಯದಿನ್ನು ಬಯಸಲ್ಯಾತಕೆ
ಚೆನ್ನ ಆದಿಕೇಶವನಲ್ಲದ ದೈವವ್ಯಾತಕೆ ||3||
← ಶ್ರೀಕೃಷ್ಣ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.