← ಶ್ರೀಕೃಷ್ಣ

ಸಾರಿ ದೂರಿ ಹೇಳುತೇನೆ ಕೆಟ್ಟಿ ಕಂಡ್ಯ

📂 ಶ್ರೀಕೃಷ್ಣ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ರೇಗುಪ್ತಿ
🥁 ತಾಳ: ಆದಿತಾಳ
ಸಾರಿ ದೂರಿ ಹೇಳುತೇನೆ ಕೆಟ್ಟಿ ಕಂಡ್ಯ ಬಡ್ಡಿ ಮನವೆ ||ಪ||
ದೂರೋ ಬುದ್ಧಿ ಮಾಡಬೇಡ ಕೈಯೊಳಿಕೊ ಕಡ್ಡಿ
ನಿನ್ನ ಕೈಯೊಳಿಕೊ ಕಡ್ಡಿ ||ಅ||

ಕೋಪವನ್ನೆ ಮಾಡದಿರು ಪಾಪಕೆ ಗುರಿಯಾಗದಿರು
ಶ್ರೀಪತಿಯ ನಾಮವನು ನೀ ಪಠಿಸುತಲಿರು ಮನವೆ ||1||

ಅಷ್ಟ ಮದದಿ ಮೆರೆಯದಿರು ನಷ್ಟಕೆ ಗುರಿಯಾಗದಿರು
ದುಷ್ಟಸಂಗವನ್ನು ಮಾಡಿ ಭ್ರಷ್ಟನಾಗಬೇಡ ಮನವೆ ||2||

ಸಿರಿಯ ಮೆಚ್ಚಿ ಮೆರೆಯದಿರು ಬರಿದೆ ಹೊತ್ತ ಕಳೆಯದಿರು
ಪರರ ನಿಂದೆಯನ್ನು ಮಾಡಿ ನರಕಿಯಾಗಬೇಡ ಮನವೆ ||3||

ಕಾಯವನ್ನು ನಂಬದಿರು ಮಾಯಕೆ ಮರುಳಾಗದಿರು
ಸ್ತ್ರೀಯರನ್ನು ಕಂಡು ನೀನು ಬಯಸದಿರು ಮರುಳು ಮನವೆ ||4||

ನಿನ್ನ ನಿಜವ ನಂಬದಿರು ಉನ್ನತಾಸೆ ಮಾಡದಿರು
ಚೆನ್ನಾದಿಕೇಶವನ ಪಾದವನ್ನು ನೀನು ನಂಬು ಮನವೆ ||5||
← ಶ್ರೀಕೃಷ್ಣ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.