← ಶ್ರೀಕೃಷ್ಣ

ಹಣ್ಣು ಕೊಂಬುವ ಬನ್ನಿರಿ

📂 ಶ್ರೀಕೃಷ್ಣ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಶಂಕರಾಭರಣ
🥁 ತಾಳ: ಆಟತಾಳ
ಹಣ್ಣು ಕೊಂಬುವ ಬನ್ನಿರಿ- ಹರಿದಾಸರು
ಹಣ್ಣು ಕೊಂಬುವ ಬನ್ನಿರಿ ||ಪ||

ಚಿನ್ನ ಬಾಲಕೃಷ್ಣನೆಂಬ
ಕನ್ನೆಗೊನೆ ಬಾಳೆಹಣ್ಣು ||ಅ||

ಸುತ್ತೇಳು ಲೋಕದಿ ಸುರರು ಬಿತ್ತಿದ ಹಣ್ಣು
ಭಕ್ತರ ಬಾಯೊಳು ನೆನೆವ ಹಣ್ಣು
ಅರ್ತಿಯುಳ್ಳವರೆಲ್ಲ ಕೊಳ್ಳಿ ಬೇಕಾದರೆ
ನಿತ್ಯ ಮಾಧವನೆಂಬ ಅಚ್ಚ ಮಾವಿನ ಹಣ್ಣು ||1||

ಅಜನ ಪಡೆದ ಹಣ್ಣು ಗಜವ ಕಾಯ್ದ ಹಣ್ಣು
ನಿಜಮುನಿಗಳಿಗೆ ತೋರಿಸಿದ ಹಣ್ಣು
ತ್ರಿಜಗವಂದಿತ ಪಾಲ್ಗಡಲೊಡೆಯನ ಹಣ್ಣು
ಸುಜನ ಭಕ್ತರೆಲ್ಲ ಕೊಳ್ಳ ಬನ್ನಿರಿ ಹಣ್ಣು ||2||

ತುರುವ ಕಾಯ್ದ ಹಣ್ಣು ಉರಗನ ತುಳಿದ ಹಣ್ಣು
ಕರೆದರೆ ಕಂಬದೊಳು ಓಯೆಂಬ ಹಣ್ಣು
ಮರುಗುವ ಧ್ರುವನಿಗೆ ಪಟ್ಟಗಟ್ಟಿದ ಹಣ್ಣು
ಕರುಣಾಳು ಕಾಗಿನೆಲೆಯಾದಿಕೆಶವ ಹಣ್ಣು ||3||
← ಶ್ರೀಕೃಷ್ಣ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.