← ಶ್ರೀಕೃಷ್ಣ
ಹೆತ್ತ ತಾಯಿಗಿಂತ ಅತ್ಯಧಿಕ ಮಾಯವುಂಟೆ
ಹೆತ್ತ ತಾಯಿಗಿಂತ ಅತ್ಯಧಿಕ ಮಾಯವುಂಟೆ
ಉತ್ತಮ ಅಶ್ವವ ಕತ್ತೆ ಹೋಲುವುದುಂಟೆ ||ಪ||
ವಿತ್ತವುಳ್ಳವನ ಕುಲ ಎಣಿಸುವುದುಂಟೆ
ಸ್ವಾರ್ಥಕೆ ನ್ಯಾಯ ಎಂದಾದರೂ ಉಂಟೆ ||1||
ಅತ್ತೆಮನೆ ಸೇರುವಗೆ ಅಭಿಮಾನವುಂಟೆ
ಬತ್ತಲೆ ತಿರುಗುವಗೆ ಭಯವು ಇನ್ನುಂಟೆ ||2||
ಪೃಥ್ವಿಯೊಳಗೆ ಕಾಗಿನೆಲೆಯಾದಿಕೇಶವಗೆ
ಮರ್ತ್ಯದೊಳನ್ಯ ದೇವರು ಸರಿಯುಂಟೆ ||3||
ಉತ್ತಮ ಅಶ್ವವ ಕತ್ತೆ ಹೋಲುವುದುಂಟೆ ||ಪ||
ವಿತ್ತವುಳ್ಳವನ ಕುಲ ಎಣಿಸುವುದುಂಟೆ
ಸ್ವಾರ್ಥಕೆ ನ್ಯಾಯ ಎಂದಾದರೂ ಉಂಟೆ ||1||
ಅತ್ತೆಮನೆ ಸೇರುವಗೆ ಅಭಿಮಾನವುಂಟೆ
ಬತ್ತಲೆ ತಿರುಗುವಗೆ ಭಯವು ಇನ್ನುಂಟೆ ||2||
ಪೃಥ್ವಿಯೊಳಗೆ ಕಾಗಿನೆಲೆಯಾದಿಕೇಶವಗೆ
ಮರ್ತ್ಯದೊಳನ್ಯ ದೇವರು ಸರಿಯುಂಟೆ ||3||