← ಶ್ರೀಕೃಷ್ಣ

ಇರಬಾರದೊ ಬಡವ ಜಗತ್ತಿನೊಳಗೆ

📂 ಶ್ರೀಕೃಷ್ಣ
✍️ ವಿಜಯದಾಸ
🏷️ ಕೀರ್ತನೆಗಳು
ಇರಬಾರದೊ ಬಡವ ಜಗತ್ತಿನೊಳಗೆ |
ಪರದೇಶಿ ಮಾನವಗೆ ದಿಕ್ಕು ಮತ್ತಾವನು

ಪೊಡವಿಪತಿ ದೃಷ್ಟಿಗಳು ಒಳ್ಳೆವಲ್ಲಾವೆಂದು |
ಬಿಡದೆ ಜನ ಪೇಳುವುದು ಸಿದ್ಧವಯ್ಯಾ |
ಬಡವ ನಾನಯ್ಯ ನಾನಾ ಕಷ್ಟಬಟ್ಟೆರಡು |
ಒಡವೆ ಸಂಪಾದಿಸಲು ಅಪಹರಿಸಿದ ನೋಡು ||1||

ದಿನ ಪ್ರತಿ ದಿನದಲ್ಲಿ ಕರಳು ಕಟ್ಟಿಕೊಂಡು |
ಹಣದಾಸಿಯಿಂದ ನಾ ಘಳಿಸಿದ್ದೆನೊ |
ಮನೆವುಗೆ ಬಂದು ಮಾಡಿಕೊಂಡೊಯ್ದಿಯಾ ಧರ್ಮವೇ |
ವನಜನಾಭನೆ ನಿನ್ನ ದೊರೆತನಕೆ ಶರಣೆಂಬೆ||2||

ದೊರೆಗಳಾ ಲಕ್ಷಣವಿದೆ ಎಂದೆಂದಿಗೆ ತಮಗೆ |
ಸರಿಬಂದ ಕಾರ್ಯಮಾಡುವರಲ್ಲದೇ |
ನೆರೆಯವರದೇ ತಪ್ಪೇ ವಿಜಯ ವಿಠ್ಠಲರೇಯ |
ಮರಳೆ ಮಾತಾಡಿದರೆ ಅಪರಾಧ ಹೊರಿಸುವರು ||3||
← ಶ್ರೀಕೃಷ್ಣ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.