← ಶ್ರೀಕೃಷ್ಣ

ಉದರ ಪೂರ್ತಿಯ ಕೊಡದಿರು ಉದಧಿಶಯನ

📂 ಶ್ರೀಕೃಷ್ಣ
✍️ ವಿಜಯದಾಸ
🏷️ ಕೀರ್ತನೆಗಳು
ಉದರ ಪೂರ್ತಿಯ ಕೊಡದಿರು ಉದಧಿಶಯನ
ಮುದದಿ ನಿನ್ನನು ನೆನೆದು ಮಲಗುವೆನೊ ಸುಖದಿ

ಮುದದಿ ನಿನ್ನ ಚರಣವನು ಸ್ಮರಿಸುವುದು |
ಪರಿಹಾರವು ಬಹು ಗರ್ವ ಹೆಚ್ಚುವುದು ಎನಗೆ |
ಅರವಿಂದನಾಭ ಹರಿ ವರವಿದೆ ನಿನ್ನ ಕೇಳ್ವೆ |
ಪರಿಹಾಸ್ಯ ನುಡಿಯಲ್ಲ ಪರಮ ಪಾವನಗೆ ||1||

ತನುಮನವು ನಿನ್ನ ವಿಷಯಕ್ಕೆರಗಲಿ |
ಅನುಮಾನವಿದ್ದ ಪರಿಯೆಲ್ಲ ತೊಲಗಿ ||
ವನಜಸಂಭವನೈಯ್ಯ ವೈಕುಂಠಪತಿ ನಿನಗೆ |
ಅನವರತ ದೊರೆ ಎಂಬೊ | ಘನತೆ ತಪ್ಪದೆ ಇರಲಿ||2||

ಗಜಮದದಿ ಕಂಗೆಟ್ಟ ಪರಿಯನ್ನ ಮಾಡದೇ ||
ಅಜಮಿಳಗೆ ಒಲಿದಂತೆ ಎನಗೆ ವೊಲಿದೂ ||
ಸುಜನ ರಕ್ಷಕನೆಂಬೊ ಬಿರುದು ಬೇಕಾದರೆ |
ನಿಜವಾಗಿ ದಯಮಾಡೊ ವಿಜಯವಿಠ್ಠಲನೇ||3||
← ಶ್ರೀಕೃಷ್ಣ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.