← ಶ್ರೀಕೃಷ್ಣ

ಕಟ್ಟೆಯ ಕಟ್ಟಿದರು ಭವ ಸಾಗರಕೆ ಸ್ವಲ್ಪ

📂 ಶ್ರೀಕೃಷ್ಣ
✍️ ವಿಜಯದಾಸ
🏷️ ಕೀರ್ತನೆಗಳು
ಕಟ್ಟೆಯ ಕಟ್ಟಿದರು ಭವ ಸಾಗರಕೆ ಸ್ವಲ್ಪ
ಬಿಟ್ಟು ವೇಗದಿಂದ ಸಾಧ್ಯ ಮಾಡಿಕೊಂಡು
ಮೆಟ್ಟಿಕೆಯಿಂದಲಿ ದಾಟಿ ಪೋದರು ಜಗ
ಜಟ್ಟಿ ದಾಸರು ತಮಗೆ ಸುಲಭವಾದದು ಯನಗೆ
ಇಟ್ಟುಪೋದರೆಯಿಂದು ಗುಟ್ಟು ತೋರುತಲಿದೆ ಸಾಧಾರಣವಲ್ಲ ||1||

ದಿಟ್ಟವಾದಕ ವನಯನ್ನಿಂದಾದದಲ್ಲ
ಬಿಟ್ಟಿಯವರಿಗೆ ತಿಳಿಯಲಿಹದೆ
ಕೊಟ್ಟಿಗೆ ಮೇಲುಪ್ಪರಿಗೆಯಾಗುವದೆ
ಹುಟ್ಟಾರಭ್ಯವಾಗಿ ಮಂದನಾಗಿದ್ದವಗೆ
ಮಟ್ಟಯಿಲ್ಲದೆ ಬುದ್ಧಿ ಬರುವದೆಂತೊ
ಧಿಟ್ಟಳಿ ಮಹಿಮ ಶಿರಿ ವಿಜಯವಿಠಲ ಮನ
ಮುಟ್ಟಿ ಭಜಿಸಿದವ ದಾಸರ ಕರುಣವೆನ್ನಿ||2||
← ಶ್ರೀಕೃಷ್ಣ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.