← ಶ್ರೀಕೃಷ್ಣ

ದೇವ ಬಂದಾ ನಮ್ಮ

📂 ಶ್ರೀಕೃಷ್ಣ
✍️ ಪುರಂದರದಾಸ
🏷️ ಕೀರ್ತನೆಗಳು
🎵 ರಾಗ: ದೇಸ್
🥁 ತಾಳ: ತ್ರಿತಾಲ
ದೇವ ಬಂದಾ ನಮ್ಮ ಸ್ವಾಮಿ ಬಂದಾನೋ
ದೇವರ ದೇವ ಶಿರೋಮಣಿ ಬಂದನೋ ||

ಉರಗಶಯನ ಬಂದ ಗರುಡಗಮನ ಬಂದ
ನರಗೊಲಿದವ ಬಂದ ನಾರಾಯಣ ಬಂದ ||

ಮಂದರೋದ್ದರ ಬಂದ ಮಾಮನೋಹರ ಬಂದ
ಬೃಂದಾವನಪತಿ ಗೋವಿಂದ ಬಂದನೋ ।
ನಕ್ರಹರನು ಬಂದ ಚಕ್ರಧರನು ಬಂದ
ಅಕ್ರೂರಗೊಲಿದ ತ್ರಿವಿಕ್ರಮ ಬಂದನೋ ||

ಪಕ್ಷಿವಾಹನ ಬಂದ ಲಕ್ಷ್ಮಣಾಗ್ರಜ ಬಂದ
ಅಕ್ಷಯಫಲದ ಶ್ರೀಲಕ್ಷ್ಮೀರಮಣ ಬಂದ |
ನಿಗಮಗೋಚರ ಬಂದ ನಿತ್ಯತೃಪ್ತನು ಬಂದ
ನಗೆಮುಖ ಪುರಂದರವಿಟ್ಠಲ ಬಂದನೋ ||
← ಶ್ರೀಕೃಷ್ಣ ಪುರಂದರದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.