← ಶ್ರೀಮಹಾಲಕ್ಷ್ಮಿ

ಕೊಲ್ಹಾಪುರ ನಿಲಯ ಸರಸಿಜಾಲಯ ಹರಿ

📂 ಶ್ರೀಮಹಾಲಕ್ಷ್ಮಿ
✍️ ವಿಜಯದಾಸ
🏷️ ಕೀರ್ತನೆಗಳು
ಕೊಲ್ಹಾಪುರ ನಿಲಯ ಸರಸಿಜಾಲಯ ಹರಿ
ವಲ್ಲಭೆ ಬಲು ಸುಲಭೆ

ಮೂಕಾಸುರನ ಕೊಂದು ಮೂಕಾಂಬಿಕೆನಿಸಿದೆ
ಲೋಕ ಜನನಿ ಕಾಮಿನಿಸಾಕಾರ ಗುಣವಂತೆ
ಶ್ರೀ ಕಮಲೆ ಎಲ್ಲಿನಾ ಕಾಣೆ ನಿನಗೆ ಸಮಾ ||1||

ಕೋಲ ಮುನಿಗೊಲಿದಮಲ ಮೃಗನಾಭಿ
ಫಾಲೆ ಸಜ್ಜನರ ಪಾಲೆಬಾಲೆ ಜಾತರಹಿತೆ
ಲೀಲೆ ನಾನಾ ಪುಷ್ಪಮಾಲೆ ಕಮಲಹಸ್ತೆ||2||

ಶಿವದುರ್ಗೆ ನೀನೆಂದು ಶ್ರವಣಮಾಡಲು ಮನುಜ
ರವರವ ನರಕದಲ್ಲಿ ಬವಣೆಪಟ್ಟ ಮೇಲೆ
ಸವಿಯದಂತೆ ತಮಸುನಿವಹದೊಳಗೆ ಇಪ್ಪನು ||3||

ಕಾಮತೀರ್ಥ ಬಳಿಯ ಪ್ರೇಮದಿಂದಲಿ ನಿಂದೆ
ಸೀಮೆಯೊಳಗೆ ನಿನ್ನಯ ನಾಮಕೊಂಡಾಡಲು
ತಾಮಸಗಳ ಕಳೆದು ನಿಷ್ಕಾಮ ಫಲ ಪಾಲಿಪೆ||4||

ಧರೆಯೊಳು ಷೋಡಶಗಿರಿಯ ಪ್ರಾದೇಶ ಮಂ
ದಿರ ರಚಿಸಿಕೊಂಡು ಇಪ್ಪೆ ವರವ ಕೊಡುವೆ ನಿತ್ಯ
ಸಿರಿ ವಿಜಯವಿಠ್ಠಲನ್ನಪರಮ ಪ್ರೀತಿ ಅರ್ಧಾಂಗಿ ||5||
← ಶ್ರೀಮಹಾಲಕ್ಷ್ಮಿ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.